ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ.
ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನೈರುತ್ಯ ಮಾನ್ಸೂನ್ ಕೇಂದ್ರ ಪಶ್ಚಿಮ ಮತ್ತು ಕೇಂದ್ರ ಪೂರ್ವ ಅರಬ್ಬಿ ಸಮುದ್ರ ಹಾಗಯೇ ಗೋವಾ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡು ಪ್ರದೇಶಗಳಿಗೆ ತಲುಪಿದೆ ಎಂದು ಐಎಂಡಿ ತಿಳಿಸಿದೆ.




