Mysore
20
broken clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ: ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಎಚ್‌ಡಿಕೆ

ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತವಾಗಿ ಪರಿಶೀಲನೆ ನಡೆಸಿದರು.

ಸೋಮವಾರ ಸಂಜೆ ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಇಲ್ಲಿಗೆ ಬಂದ ಸಚಿವರು, ಇಡೀ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ಬರುವಂತೆ ಮಾಡಿ ಮಂಗಳವಾರ ಬೆಳಗಿನ ಜಾವ ಬೆಂಗಳೂರಿಗೆ ವಾಪಸ್ ಬಂದರು.

ಬೆಂಗಳೂರಿನಿಂದ ವಿಶಾಖಪಟ್ಟಣಕ್ಕೆ ಧಾವಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಿದರು.

ಉಕ್ಕು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ದ್ರವರೂಪದ ಕೊಳಗದಿಂದ ದ್ರವರೂಪದ ಲೋಹ ಸೋರಿಕೆಯಾದ ಹಿನ್ನೆಲೆಯಲ್ಲಿ ಸ್ಪೋಟ ಸಂಭವಿಸಿ ದುರಂತ ಘಟಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದು, ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದರು. ದುರಂತ ನಡೆದ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಕೇಂದ್ರದ ಉಕ್ಕು ಸಚಿವರು, ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದರು.

ಅಲ್ಲದೆ, ದುರಂತದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಬಗ್ಗೆ ಹಾಗೂ ದುರಂತಕ್ಕೆ ಕಾರಣವಾದ ಅಂಶಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿಗೆ ಸಚಿವ ಕುಮಾರಸ್ವಾಮಿ ಅವರು ಸೂಚನೆ ನೀಡಿದರು.

ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಉದ್ಯೋಗ ಮತ್ತು ಅವರಿಗೆ ದೊರೆಯುವ ಪ್ರಯೋಜನಗಳ ಜತೆಗೆ ₹25 ಲಕ್ಷ ಪರಿಹಾರವನ್ನು ನೀಡಲಾಗುವುದು. ತೀವ್ರವಾಗಿ ಗಾಯಗೊಂಡ ಕಾರ್ಮಿಕರಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಕಾರ್ಖಾನೆಗೆ ಭರಿಸಲಿದೆ ಎಂದು ಸಚಿವರು ಘೋಷಿಸಿದರು.

Tags:
error: Content is protected !!