Mysore
25
overcast clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ತಾಂತ್ರಿಕ ಶಿಕ್ಷಣ)ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದೆಂದು ಘೋಷಿಸಿರುವುದು ಶ್ಲಾಘನೀಯ.

ಪ್ರಸ್ತುತ ದೇಶದಲ್ಲಿ ಅತ್ಯಂತ ದುಬಾರಿಯಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಪರಿವರ್ತಿಸಿ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮವಾದ ಆರೋಗ್ಯ ಸೌಲಭ್ಯವನ್ನು ಕಡಿಮೆ ವೆಚ್ಚದಲ್ಲಿ ದೊರಕಿಸಿಕೊಡಬೇಕು ಎಂಬುದು ಎಲ್ಲರ ಬೇಡಿಕೆ. ಇನ್ನು ಮುಂದಾದರೂ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಯೋಚಿಸಿ ಶಿಕ್ಷಣ ನೀತಿಯನ್ನು ಮಾರ್ಪಾಡು ಮಾಡಿ ಉಚಿತವಾದ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಸರ್ವರಿಗೂ ಕಲ್ಪಿಸುವುದು ಅತ್ಯಗತ್ಯ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

Tags:
error: Content is protected !!