Mysore
31
overcast clouds

Social Media

ಮಂಗಳವಾರ, 16 ಜೂನ್ 2026
Light
Dark

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ.

ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ನಿನ್ನೆಯಿಂದಲೂ ಬಿಸಿಲು ಕೂಡ ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ.

ಪ್ರಸ್ತುತ ಜಲಾಶಯದ ಒಳಹರಿವು 285 ಕ್ಯೂಸೆಕ್ಸ್‌ ಇದ್ದು, ಜಲಾಶಯದಿಂದ 180 ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ.

ಜಲಾಶಯದ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 8.5 ಟಿಎಂಸಿ ಇದೆ. ಆದರೆ ಪ್ರಸ್ತು ಜಲಾಶಯದಲ್ಲಿ ಕೇವಲ 3.0 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಮಳೆ ಕೊರತೆ ಮುಂದುವರಿದರೆ ಕೃಷಿ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅನ್ನದಾತರು ಆತಂಕ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!