Mysore
29
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ.

ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮುನ್ಸಿಪಲ್‌ ಕಾರ್ಪೋರೇಷನ್‌ ನಗರದಾದ್ಯಂತ ನೀರು ಸಂರಕ್ಷಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ.

ನೀರಿನ ಅಗತ್ಯಗಳಿಗೆ ಆದ್ಯತೆ ನೀಡುವ ಪ್ರಯತ್ನಗಳ ಭಾಗವಾಗಿ ನಗರದಾದ್ಯಂತ ಇರುವ ಈಜುಕೊಳಗಳಿಗೆ ನೀರಿನ ಸರಬರಾಜು ಸಂಪರ್ಕಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರು ಶೇ.20ರಷ್ಟು ನೀರು ಕಡಿತ ಎದುರಿಸಬೇಕಾಗಿದೆ.

ಕೈಗಾರಿಕಾ ಘಟಕಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕ್ರೀಡಾ ಕ್ಲಬ್‌ಗಳಿಗೆ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಗೊಳಿಸಲಾಗಿದೆ. ಪ್ಯಾಕೇಜ್‌ ಕುಡಿಯುವ ನೀರು ಮತ್ತು ಪಾನಿಯಾ ತಯಾರಕರು ಅಗತ್ಯಕ್ಕೆ ತಕ್ಕಂತೆ ನೀರನ್ನು ಬಳಸಬೇಕು. ನೀರಿನ ಕೊರತೆಯ ಸಮಯದಲ್ಲಿ ಅನಗತ್ಯ ನೀರು ಪೋಲು ಮಾಡದೇ ಲಭ್ಯವಿರುವ ನೀರಿನ ಸಂಪನ್ಮೂಲ ಬಳಸಿಕೊಳ್ಳಬೇಕು. ಕುಡಿಯುವ ನೀರನ್ನು ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!