Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್‌ ವಿರುದ್ಧ ದೂರು ನೀಡಲಾಗಿದೆ.

ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್‌ ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡುತ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡುತ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪವನ್ನು ಅಲ್ಲಗೆಳೆದಿರುವ ಪವಿತ್ರಾ ಗೌಡ ಜೈಲಿನಲ್ಲಿ ಇದ್ದುಕೊಂಡೇ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಜೊತೆ ರಶ್ಮಿ ಎಂಬ ಆರೋಪಿಯೂ ದೂರು ನೀಡಿದ್ದಾರೆ.

 

Tags:
error: Content is protected !!