Mysore
25
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್‌ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ ಪೀಠ ಜೂ.18 ರಂದು ವಿಚಾರಣೆ ನಡೆಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಸರ್ಕಾರದ ಕ್ರಮ ಕನಿಷ್ಠ ನಿರ್ಬಂಧವಾಗಿದೆ. ಇದರಿಂದ ಆದೇಶ ಅಸಮಾನವಾಗಿದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ

 

Tags:
error: Content is protected !!