Mysore
30
light rain

Social Media

ಶನಿವಾರ, 20 ಜೂನ್ 2026
Light
Dark

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಅವರು ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದರೂ ರಾಜ್ಯದಲ್ಲಿ ವಾಡಿಕೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆದರೆ ಮುಂದಿನ ಎರಡು ತಿಂಗಳು ಕಾಲ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ ಜನರು ಆತಂಕಕ್ಕೆ ಒಳಗಾಗಬಾರದು ಎಂದು ಅಭಯ ನೀಡಿದರು.

ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಭಾಗಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆಆರ್‌ಎಸ್ ಅಣೆಕಟ್ಟಿನಲ್ಲಿ ಪ್ರಸ್ತುತ 11 ಟಿಎಂಸಿ ನೀರು ಸಂಗ್ರಹವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವವಿರುವುದರಿಂದ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ನದಿ ನೀರು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಇದು ಸಂಪೂರ್ಣವಾಗಿ ಕುಡಿಯುವ ನದಿ ನೀರು ಯೋಜನೆಯ ನಾವು ನೀರನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ. ಇದು ಗೊತ್ತಿದ್ದು ತಮಿಳುನಾಡಿನ ಸರ್ಕಾರ ಸುಖ-ಸುಮ್ಮನೆ ಖಾತೆ ತೆಗೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಮೇಕೆದಾಟು ನದಿ ನೀರು ಯೋಜನೆ, ಕರ್ನಾಟಕದ ಮಹತ್ವಕಾಂಕ್ಷಿಯ ನೀರಾವರಿ ಯೋಜನೆಗಳಲ್ಲಿ ಒಂದಾಗಿದೆ ಹೊಸದಾಗಿ ಆಣೆಕಟ್ಟು ಕಟ್ಟಿ ನೀರನ್ನು ಸಂಗ್ರಹಿಸಿ ಕುಡಿಯುವ ನೀರಿನ ಬಳಕೆಗೆ ಬಳಸಿಕೊಳ್ಳುತ್ತೇವೆ. ಆದರೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಯೋಜನೆಗೆ ಅಡ್ಡಿಪಡಿಸುತ್ತದೆ. ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಅವರು ಹೇಳಿದರು.

Tags:
error: Content is protected !!