Mysore
23
overcast clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ ಆದರೆ ಬಡಜನರು ಚಿಕಿತ್ಸೆಗಾಗಿ ಮೈಸೂರಿಗೆ ಹೋಗುವುದು ಅನಿವಾರ್ಯವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರು ಕೂಡಲೇ ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲೆ ಫಿಜಿಯೋ ಥೆರಪಿ ತಜ್ಞರನ್ನು ನೇಮಕ ಮಾಡುವ ಮೂಲಕ ತಾಲ್ಲೂಕಿನ ಜನರಿಗೆ ಅನುಕೂಲ ಕಲ್ಪಿಸಬೇಕು.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ

Tags:
error: Content is protected !!