Mysore
28
overcast clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಗ್ರಹ ದಳ ಹಾಗೂ ಶ್ವಾನ ದಳದಿಂದ ವ್ಯಾಪಕ ತಪಾಸಣೆ ನಡೆಸಲಾಯಿತು.

ನ್ಯಾಯಾಲಯದ ಅಧಿಕಾರಿಗಳ ಗಮನಕ್ಕೆ ಬೆದರಿಕೆ ಇ-ಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದ ಜಿಲ್ಲಾ ಪೊಲೀಸರು, ಬಾಂಬ್ ನಿಗ್ರಹ ದಳ ಮತ್ತು ಶ್ವಾನದಳದ ಸಿಬ್ಬಂದಿ ನ್ಯಾಯಾಲಯದ ಸಂಕೀರ್ಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಸುರಕ್ಷತೆಯ ದೃಷ್ಟಿಯಿಂದ ನ್ಯಾಯಾಲಯದ ಆವರಣಕ್ಕೆ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಪರಿಶೀಲನೆ ನಡೆಸಿದ ನಂತರ ಅದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದು ಎಲ್ಲರೂ ನಿಟ್ಟುಸಿರು ಬಿಟ್ಟರು.

Tags:
error: Content is protected !!