Mysore
28
overcast clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ 7.2 ಮತ್ತು 7.5 ತೀವ್ರತೆಯ ಭೂಕಂಪಗಳು ಕೇವಲ ಒಂದು ನಿಮಿಷದ ಅಂತರದಲ್ಲಿ ಸಂಭವಿಸಿದ ಪರಿಣಾಮ ಅನೇಕ ಕಟ್ಟಡಗಳು ಕುಸಿದಿವೆ. ಅಲ್ಲದೇ ಸಾವಿರಾರು ಜನರು ಜೀವಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ರಾಜಧಾನಿ ಕ್ಯಾರಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳು ತೀವ್ರವಾಗಿ ಅಲುಗಾಡಿದ ಪರಿಣಾಮ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಧಾವಿಸಿದರು. ಕೆಲ ಪ್ರದೇಶಗಳಲ್ಲಿ ಕಟ್ಟಡಗಳ ಗೋಡೆಗಳು ಕುಸಿದು ಬಿದ್ದಿದ್ದು, ರಸ್ತೆಗಳಲ್ಲಿ ಅವಶೇಷಗಳ ರಾಶಿ ಕಂಡುಬಂದಿದೆ. ಹಲವೆಡೆ ವಿದ್ಯುತ್ ಕಂಬಗಳು ಉರುಳಿದ್ದು, ಸಂಚಾರ ಹಾಗೂ ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

ಭೂಕಂಪದ ನಂತರ ಕ್ಯಾರಕಾಸ್‌ನ ಕೆಲವು ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಮತ್ತು ವಿದ್ಯುತ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಕುಟುಂಬ ಸದಸ್ಯರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗದೆ ಅನೇಕರು ಆತಂಕಕ್ಕೆ ಒಳಗಾಗಿದ್ದಾರೆ. ಭೂಕಂಪದಿಂದ ಭಯಭೀತರಾದ ಜನರು ಗಂಟೆಗಟ್ಟಲೆ ರಸ್ತೆಗಳಲ್ಲಿ ಆಶ್ರಯ ಪಡೆದಿರುವ ದೃಶ್ಯಗಳು ಕಂಡುಬಂದಿವೆ. ಭೀಕರ ಭೂಕಂಪದ ಹಿನ್ನೆಲೆ ವೆನೆಜುವೆಲಾದ ಮುಖ್ಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಏತನ್ಮಧ್ಯೆ ಹಂಗಾಮಿ ಅಧ್ಯಕ್ಷೆ ಡೆಲ್ಲಿ ರೊಡ್ರಿಗಸ್‌ ಅವರು ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

 

Tags:
error: Content is protected !!