Mysore
22
few clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಅಧಿಕಾರಾವಧಿ ಜೂನ್ 30ಕ್ಕೆ ಅಂತ್ಯಗೊಳ್ಳುತ್ತಿರುವ ಪರಿಣಾಮ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಿಸಲಾಗಿದೆ. ಪ್ರೊ.ಶರಣಪ್ಪ ವಿ.ಹಲಸೆ ಅವರ ಅಧಿಕಾರವು ೨೦೨೫ರ ನವೆಂಬರ್ ೧೧ರಲ್ಲಿ ಮುಕ್ತಾಯವಾಗಿತ್ತಾದರೂ ರಾಜ್ಯಪಾಲರು ಆರು ತಿಂಗಳ ಕಾಲ ವಿಸ್ತರಿಸಿದ್ದರು. ಜೂನ್ ಅಂತ್ಯಕ್ಕೆ ದಿನಗಣನೆ ಶುರುವಾಗಿದ್ದರಿಂದ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಅನೇಕರು ತಮ್ಮದೇ ಆದ ಶಿಫಾರಸ್ಸು ಮಾಡಿಸುವ ಮೂಲಕ ರಾಜ್ಯಪಾಲರ ಮನಗೆಲ್ಲಲು ಮುಂದಾಗಿದ್ದರು. ಆದರೆ, ದಿಢೀರನೇ ರಾಜ್ಯಪಾಲರ ಸಚಿವಾಲಯದಿಂದ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಿಸಲಾಗಿದೆ ಎಂದು ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಹೇಳಿದ್ದಾರೆ.

 

 

Tags:
error: Content is protected !!