Mysore
29
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮುಳ್ಳೂರು ಗ್ರಾಮದ ರೈತ ಕಿರಣ್ ಅವರ ಮೇಲೆ ನಡೆದ ಹುಲಿ ದಾಳಿ ಬಳಿಕ ಸ್ಥಳ ಪರಿಶೀಲನೆ ಹಾಗೂ ಹುಲಿ ಸೆರೆ ಕಾರ್ಯಾಚರಣೆಗಾಗಿ ಡಿಸಿಎಫ್ ನಂದೀಶ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಮತ್ತು ಎಸ್‌ಟಿಎಫ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ತಕ್ಷಣ ಡ್ರೋನ್ ಕ್ಯಾಮರಾ ಮೂಲಕ ಕಾರ್ಯಚರಣೆ ನಡೆಯುತ್ತಿತ್ತು. ಈ ವೇಳೆ ಪೊದೆಯೊಳಗಿದ್ದ ಹುಲಿ ಏಕಾಏಕಿ ದಾಳಿ ನಡೆಸಿ ಎಸ್‌ಟಿಎಫ್ ಗಾರ್ಡ್ ಕುಮಾರ್ (37) ಅವರ ಎಡಗೈ ತೋಳಿಗೆ ಕಚ್ಚಿ ಗಾಯಗೊಳಿಸಿದೆ.

ತಕ್ಷಣವೇ ಸಿಬ್ಬಂದಿ ಅವರನ್ನು ಸುರಕ್ಷಿತವಾಗಿ ರಕ್ಷಿಸಿ ಮೈಸೂರಿನ ಅಪಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಕುಮಾರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಎಸಿಎಫ್ ಪರಮೇಶ್ ಡಿ, ಎಸ್‌ಟಿಎಫ್ ಎಸಿಎಫ್ ಮಂಜುನಾಥ್, ನುಗು ಆರ್‌ಎಫ್‌ಒ ಅನಿತ್ ರಾಜ್, ಕಲ್ಕೆರೆ ಆರ್‌ಎಫ್‌ಒ ರಾಜೇಶ್ ಸೇರಿದಂತೆ ಅರಣ್ಯ ಇಲಾಖೆ ಹಾಗೂ ಎಸ್‌ಟಿಎಫ್ ಸಿಬ್ಬಂದಿ ಉಪಸ್ಥಿತರಿದ್ದರು.

ಹುಲಿ ಮತ್ತೆ ದಾಳಿ ನಡೆಸಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಬೋನು ಅಳವಡಿಸಿ ಹುಲಿಯನ್ನು ಸೆರೆಹಿಡಿಯುವ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

Tags:
error: Content is protected !!