Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ಓದುಗರ ಪತ್ರ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು ಚುನಾವಣಾ ಆಯೋಗದ ಪರವಾಗಿ ಆಗಮಿಸುವ ಬೂತ್ ಲೆವೆಲ್ ಆಫೀಸರ್ಸ್ (ಬಿಎಲ್‌ಒ)ಗಳಿಗೆ ಒದಗಿಸಬೇಕು ಎಂದು ಸಂಪೂರ್ಣ ಮಾಹಿತಿ ಇಲ್ಲ.

ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಹಾಗೂ ಇನ್ನಿತರೆ ಉದ್ಯೋಗದಲ್ಲಿರುವವರು ಬೇರೆ ಬೇರೆ ಊರು ಗಳಿಗೆ ವರ್ಗಾವಣೆಯಾಗುತ್ತಿರುತ್ತಾರೆ. ಪ್ರಸ್ತುತ ಒಂದು ಊರಿನ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದವರಿಗೆ ೨೦೦೨ರ ಮತದಾರರ ಪಟ್ಟಿಯಲ್ಲಿ ಯಾವ ಊರಿನ ಯಾವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇತ್ತು, ಯಾವ ಮತದಾನ ಕೇಂದ್ರದಲ್ಲಿ ಮತ ಹಾಕಿದ್ದಿರಿ ಎಂಬ ವಿವರ ನೀಡಿ ಎಂದರೆ ಅದು ಕೆಲವರಿಗೆ ಸಾಧ್ಯವಾಗುವುದಿಲ್ಲ. ಕೇಳಿದ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಜಿ -ರಂಗಳಲ್ಲಿ ದಾಖಲಿಸದಿದ್ದರೆ ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟುಹೋಗಬಹುದು ಎಂಬ ಆತಂಕವೂ ಇದೆ.

ಆದ್ದರಿಂದ ಚುನಾವಣಾ ಆಯೋಗದವರು ದಿನಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಪ್ರಕ್ರಿಯೆಗೆ ಯಾವ ರೀತಿಯ ದಾಖಲೆಗಳನ್ನು ಒದಗಿಸಬೇಕು ಎಂಬುದರ ಬಗ್ಗೆ ಜಾಹೀರಾತಿನ ಮೂಲಕ ತಿಳಿಸಿದರೆ ಎಸ್‌ಐಆರ್ ಪ್ರಕ್ರಿಯೆ ಸುಗಮವಾಗಿ ನಡೆಯಲು ಸಹಕಾರಿಯಾಗುತ್ತದೆ. ಸಂಬಂಧಪಟ್ಟವರು ಕೂಡಲೇ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು.

-ಎ.ಎಸ್.ಗೋಪಾಲಕೃಷ್ಣ , ರಾಮಕೃಷ್ಣನಗರ, ಮೈಸೂರು

 

Tags:
error: Content is protected !!