ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ದುರದೃಷ್ಟಕರ ಹಾಗೂ ಸ್ವಯಂಕೃತ ಅಪರಾಧ. ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುತ್ತವೆ. ಇಂತಹ ದುರಂತಗಳನ್ನು ತಡೆಗಟ್ಟಲು ಮುತ್ತತ್ತಿಯ ಕಾವೇರಿ ನದಿಯ ಬಳಿ ಪೊಲೀಸರನ್ನು ನಿಯೋಜಿಸುವುದು ಒಳಿತು. ಹಾಗೆಯೇ ಪ್ರವಾಸಿಗರೂ ನದಿಯ ಬಳಿ ಹೋದಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ.
-ಜಿ.ಪಿ.ಸತೀಶ, ಮೈಸೂರು


