Mysore
24
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು ಸೇರಿದಂತೆ ಕೋಟ್ಯಂತರ ರೂ.ಗಳನ್ನು ದೇವಾಲಯಗಳ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವುದು ಬೇಸರದ ಸಂಗತಿಯಾಗಿದೆ. ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋದ ಬಗ್ಗೆ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ ದೇವಾಲಯಗಳಲ್ಲಿ ಕಾಣಿಕೆ ಹಣ ಹಾಗೂ ದೇವಾಲಯಗಳಿಗೆ ಭಕ್ತರು ದೇಣಿಗೆ ರೂಪದಲ್ಲಿ ನೀಡುವ ಚಿನ್ನಾಭರಣದ ದುರುಪಯೋಗ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಭಕ್ತರ ನಂಬಿಕೆಯನ್ನು ಉಳಿಸಿಕೊಳ್ಳಬೇಕು.

 -ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

Tags:
error: Content is protected !!