Mysore
22
broken clouds

Social Media

ಬುಧವಾರ, 07 ಅಕ್ಟೋಬರ್ 2026
Light
Dark

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಭೂಕುಸಿತದ ದುರಂತದ ಬಗ್ಗೆ ಮಾಹಿತಿ ಪಡೆದ ಸಿಎಂ ವಿ.ಡಿ.ಸತೀಶನ್‌ ಅವರು ಇಬ್ಬರು ಸಚಿವರು ಕೂಡಲೇ ಘಟನಾ ಸ್ಥಳಕ್ಕೆ ಹೋಗುವಂತೆ ಸೂಚನೆ ನೀಡಿದ್ದಾರೆ.

Tags:
error: Content is protected !!