Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಡ್ಯಾಂಗೆ ಸದ್ಯ 7531 ಕ್ಯೂಸೆಕ್ಸ್‌ ಒಳಹರಿವು ದಾಖಲಾಗಿದೆ.

ನಿನ್ನೆ ಬೆಳಿಗ್ಗೆ 5734 ಕ್ಯೂಸೆಕ್ಸ್‌ ಇದ್ದ ಒಳಹರಿವು, ಈಗ ಸುಧಾರಿಸುವುದು ರೈತರಲ್ಲಿ ಸಂತಸ ತಂದಿದೆ.

124.80 ಅರಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಹೆಚ್ಚಾಗುವ ಸಾಧ್ಯತೆಯಿದೆ.

 

Tags:
error: Content is protected !!