Mysore
27
light rain

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ.

ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ಸ್‌ ಒಳಹರಿವಿದ್ದು, 300ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಹೇಮಾವತಿ ಜಲಾಶಯವು ಒಂದಾಗಿದೆ.

ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!