Mysore
28
overcast clouds

Social Media

ಶನಿವಾರ, 11 ಜುಲೈ 2026
Light
Dark

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ ಹಾನಿಯಾಗಿದೆ.

ಮನಬಂದಂತೆ ಥಾರ್‌ ಕಾರು ಚಲಾಯಿಸಿದ ಕಿಡಿಗೇಡಿಗಳು ಜಾನುವಾರುಗಳು ಹಾಗೂ ವನ್ಯಜೀವಿಗಳ ಮೇವನ್ನು ಮಣ್ಣು ಪಾಲು ಮಾಡಿದ್ದಾರೆ.

ಈ ಪ್ರದೇಶಕ್ಕೆ ವಾಹನಗಳ ನಿರ್ಬಂಧವಿದ್ದರೂ ಅತಿಕ್ರಮ ಪ್ರವೇಶ ಮಾಡಿ ಪ್ರವಾಸಿಗರು ಪುಂಡಾಟ ಮೆರೆದಿದ್ದಾರೆ. ಪ್ರವಾಸಿಗರ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Tags:
error: Content is protected !!