ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು.
ಜಾನಕಿ ಅವರ ಪುತ್ರ ಮುರುಳಕೃಷ್ಣ ಅವರ ಮಗಳಾದ ಅಪ್ಸರಾ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತು. ರಾಜ್ಯ ಸರ್ಕಾರದ ಸೂಚನೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಜರುಗಿತು.
ಕಣಿಯನಹುಂಡಿ ಗ್ರಾಮದಲ್ಲಿನ ನವೀನ್ ಅವರ ಫಾರಂ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.




