Mysore
25
overcast clouds

Social Media

ಬುಧವಾರ, 15 ಜುಲೈ 2026
Light
Dark

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಓದುಗರ ಪತ್ರ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ ಆದೇಶ ಹೊರಡಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ.

ಮಧುಮೇಹ,ರಕ್ತದೊತ್ತಡ, ಕಣ್ಣಿನ ಸೋಂಕು ಹಾಗೂ ಹೃದ್ರೋಗ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಇದರ ಜೊತೆಗೆ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಗಳನ್ನು ಮಾರುವಂತಿಲ್ಲ. ಒಂದು ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಬಡ್ಡಿ ಸಮೇತ ಮರುಪಾವತಿಸಬೇಕು ಹಾಗೂ ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವುದು ಸ್ವಾಗತಾರ್ಹ.

ಈಗಾಗಲೇ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ತೆರೆದು ೧,೬೦೦ ಕ್ಕಿಂತ ಹೆಚ್ಚು ಔಷಧಗಳನ್ನು ಕಡಿಮೆ ಬೆಲೆಗೆ ನೀಡುವುದರ ಜೊತೆಗೆ, ೩೯ ಅಗತ್ಯ ಔಷಧಗಳ ಬೆಲೆ ಇಳಿಕೆ ಮಾಡಿರುವುದು ಒಳ್ಳೆಯ ಬೆಳವಣಿಗೆ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.

 

Tags:
error: Content is protected !!