ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.
ಹರೀಶ್, ಪತ್ನಿ ನಿಶ್ಚಿತಾ ಹಾಗೂ 13 ಹಾಗೂ 6 ವರ್ಷದ ಮಕ್ಕಳು ಮೃತರೆಂದು ಗುರುತಿಸಲಾಗಿದೆ.
ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಹರೀಶ್, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಹಾಗೂ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





