ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.
ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಸುಮಾರು 8 ಅಡಿ ನೀರು ಸಂಗ್ರಹವಾದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.




