ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವ ಸಲಹೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮುಂದಿಟ್ಟಿದೆ.
ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಸೋನಮ್ ವಾಂಗ್ಚುಕ್ ಪತ್ನಿ ಗೀತಾಂಜಲಿ ಜೆ.ಆಂಗ್ಮೋ ಅವರು ದೆಹಲಿ ಹೈಕೋರ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ.




