Mysore
31
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹರದು ಬರುತ್ತಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಇಡೀ ದೇವಸ್ಥಾನವನ್ನು ವಿವಿಧ ಹೂವು, ಹಣ್ಣುಗಳಿಂದ ಅಲಂಕರಿಸಲಾಗಿದೆ. ಬೆಳಿಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಮಾಡುತ್ತಿದ್ದಾರೆ.

Tags:
error: Content is protected !!