Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿ ಚೋಯ್‌ಮಾಲ್ಯ ಬಾಗ್ವಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.

ಅಪರಾಧ ಹಿನ್ನೆಲೆ ಇಲ್ಲದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಠಿಣ ಅಥವಾ ಬಲವಂತದ ಕ್ರಮ ಜರುಗಿಸಬಾರದು ಎಂದು ಸುಪ್ರೀಂಕೋರ್ಟ್‌ ಎಲ್ಲಾ ರಾಜ್ಯಗಳಿಗೆ ತಡೆ ನೀಡಿದ್ದು, ವಿವಿಧ ರಾಜ್ಯಗಳಲ್ಲಿ ಬಂಧನಕ್ಕೊಳಗಾಗಿರುವ 18 ವರ್ಷದೊಳಗಿನ ಅಪ್ರಾಪ್ತರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.

ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡವರು ಕಾನೂನನ್ನು ಎದುರಿಸಬೇಕು. ನ್ಯಾಯಯುತ ತನಿಖೆಯ 200ಕ್ಕೂ ಹೆಚ್ಚು ಗಾಯಗೊಂಡ ಪೊಲೀಸ್‌ ಸಿಬ್ಬಂದಿಯ ಕುಟುಂಬಗಳ ಕಳವಳಗಳನ್ನು ಸಹ ಪರಿಹರಿಸಬೇಕು ಎಂದು ಹೇಳಿದೆ.

 

Tags:
error: Content is protected !!