Mysore
23
overcast clouds

Social Media

ಗುರುವಾರ, 30 ಜುಲೈ 2026
Light
Dark

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ.

ನಂಜನಗೂಡು ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಜನಪ್ರತಿನಿಧಿಗಳಾದವರು ಚುನಾವಣೆಗೆ ಮುನ್ನ ನೀಡಿರುವ ಆಶ್ವಾಸನೆ ಇನ್ನೂ ಈಡೇರಿಲ್ಲ. ಇನ್ನಾದರೂ ಈ ಭಾಗದ ಜನಪ್ರತಿನಿಧಿಗಳು ತುರ್ತು ಗಮನ ಹರಿಸಿ ಕೂಡ್ಲಾಪುರ ಗ್ರಾಮಕ್ಕೆ ಪೈಪುಗಳ ಮೂಲಕ ಕಬಿನಿ ನೀರು ಹರಿಯುವಂತೆ ಮಾಡಿ ಜನರಿಗೆ ನೀರಿನ ಸೌಲಭ್ಯ ಕಲ್ಪಿಸಬೇಕು. ಜತೆಗೆ ಕೆರೆ ಕಟ್ಟೆಗಳ ಹೂಳು ತೆಗೆಸಿ ನೀರು ತುಂಬಿಸಿದರೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ.

-ಕೆ.ಪಿ.ಬಸವಯ್ಯ, ಮೈಸೂರು

 

Tags:
error: Content is protected !!