Mysore
24
overcast clouds

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ.

ಆಷಾಢ ಮಾಸದ ಮೂರನೇ ಶುಕ್ರವಾರದವಾಗಿರುವ ಹಿನ್ನೆಲೆಯಲ್ಲಿ ಇಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ದೇವಸ್ಥಾನಕ್ಕೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ.

ಇಂದು ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮೆಟ್ಟಿಲುಗಳ ಮೂಲಕ ಹತ್ತುವ ಭಕ್ತರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Tags:
error: Content is protected !!