ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ ನಿರ್ಮಾಣ ಮಾಡುವುದಾಗಿ ಮಠದ ಪೀಠಾಧ್ಯಕ್ಷರಾದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿರುವುದು ಶ್ಲಾಘನೀಯ.
ಮಂತ್ರಾಲಯದಲ್ಲಿ ಪದೇ ಪದೇ ಎದುರಾಗುವ ಕುಡಿಯುವ ನೀರಿನ ಬವಣೆಯನ್ನು ಶಾಶ್ವತವಾಗಿ ನಿವಾರಿಸಲು ಹಾಗೂ ಮಂತ್ರಾಲಯದ ಸುತ್ತಮುತ್ತಲ ಗ್ರಾಮಗಳ ಜನರಿಗೆ ಕುಡಿಯುವ ನೀರು ಪೂರೈಸಲು ಮಳೆಗಾಲದಲ್ಲಿ ನೀರನ್ನು ಈ ಜಲಾಶಯದ ಮೂಲಕ ಸಂಗ್ರಹ ಮಾಡಿ ಬೇಸಿಗೆಯಲ್ಲಿ ಬಳಸಿಕೊಳ್ಳಲು ಇಂಪೌಂಡಿಂಗ್ ಜಲಾಶಯ ನಿರ್ಮಾಣ ಮಾಡಿ ಅನುಕೂಲ ಮಾಡಿಕೊಡುತ್ತಿರುವ ಮಠದ ಕಾರ್ಯ ಜನಮೆಚ್ಚುವಂತಹದ್ದು.
ಈ ಯೋಜನೆಯ ಸಾರ್ಥಕತೆಗೆ ಎಚ್‌ಎಎಲ್ ಸಂಸ್ಥೆಯು ತನ್ನ ಸಿಎಸ್‌ಆರ್ ನಿಧಿಯಿಂದ ಅನುದಾನ ನೀಡಲು ಮುಂದಾಗಿರುವುದು ಒಳ್ಳೆಯ ಕೆಲಸ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು



