ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ ಆತಂಕ ಎದುರಿಸುವಂತಾಗಿದೆ.
ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಅವುಗಳನ್ನು ಆಲಿಸಿ ಸರ್ಕಾರ ಅವರ ನೆರವಿಗೆ ತುರ್ತಾಗಿ ಬರಬೇಕಿದೆ. ರಾಜ್ಯ ಸರ್ಕಾರ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದರ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ರೈತರ ಮಕ್ಕಳಿಗೆ ವಿದ್ಯಾಭ್ಯಾಸದ ಶುಲ್ಕಗಳಲ್ಲಿ ರಿಯಾಯಿತಿ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು



