Mysore
23
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ನನಗೆ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಒಬ್ಬೊಬ್ಬ ಅಧಿಕಾರಿ ಒಂದೊಂದು ರೀತಿ ನಮಗೆ ಸುಳ್ಳು ಹೇಳುತ್ತಿದ್ದಾರೆ. ನನಗೆ ಇಡೀ ಪ್ರಕರಣದ ಬಗ್ಗೆ ಸತ್ಯಾಸತ್ಯತೆ ಗೊತ್ತಾಗುತ್ತಿಲ್ಲ. ಬೇಟೆಯಾಡಿಕೊಂಡು ವಾಪಸ್ ಬರುವಾಗ ಗುಂಡು ಹೊಡೆದರು ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಇದನ್ನ ನಂಬುವ ಸ್ಥಿತಿಯಲ್ಲಿ ನಾನು ಇಲ್ಲ. ಎನ್ಕೌಂಟರ್ ಮಾಡಿದ ಮೇಲೆ ಮೃತ ದೇಹ ಯಾಕೆ ಅಲ್ಲಿಂದ ಮೈಸೂರಿಗೆ ಶಿಫ್ಟ್ ಮಾಡಿದರು. ಯಾರನ್ನು ಕೇಳದೆ ಮೈಸೂರಿಗೆ ಮೃತ ದೃಹ ಏಕೆ ಬಂತು. ನನಗೆ ಅರಣ್ಯ ಇಲಾಖೆಯವರು ಹೇಳುತ್ತಿರುವುದು ಸುಳ್ಳು ನನಗೆ ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಇದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ. ಮೃತಪಟ್ಟಿರುವವರು ಭೇಟೆಗಾರರು ಎಂದು ನನಗೆ ಅನಿಸುವುದಿಲ್ಲಾ. ಅರಣ್ಯ ಇಲಾಖೆಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಪ್ರಕರಣದಿಂದ ಸರ್ಕಾರಕ್ಕೂ ಮುಜುಗರ ಆಗಿದೆ. ಪ್ರಕರಣದ ಬಗ್ಗೆ ಇನ್ನು ಯಾರು ದೂರು ಕೊಟ್ಟಿಲ್ಲ. FIR ಆಗದೆ ಮರಣೋತ್ತರ ಪರೀಕ್ಷೆ ಆಗಲ್ಲ ಎಂದು ಹೇಳಿದರು.

 

Tags:
error: Content is protected !!