Mysore
28
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು ನಿರ್ಮಾಣವನ್ನು ಆರಂಭಿಸುವುದಾಗಿ ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಸರ್.ಎಂ.ವಿ.ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ನೂತನವಾಗಿ ಜಲಸಂಪನ್ಮೂಲ ಖಾತೆಯ ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು ಮೇಕೆದಾಟು ಯೋಜನೆಯ ಪರಿಷ್ಕೃತ ಡಿಪಿಆರ್ ಸಲ್ಲಿಕೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಅಣೆಕಟ್ಟೆ ನಿರ್ಮಾಣಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಿ ಅಗತ್ಯ ಅನುಮತಿ ಪಡೆದು ಮುಂದಿನ ಸ್ವಾತಂತ್ರ ದಿನಾಚರಣೆ ವೇಳೆಗೆ ಯೋಜನೆಯ ಕಾಮಗಾರಿ ಕಾರ್ಯಾರಂಭಗೊಳಿಸಲು ಉತ್ಸುಕನಾಗಿದ್ದು, ಮುಖ್ಯಮಂತ್ರಿಗಳು ಸಹ ಈ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡಿದ್ಧಾರೆಂದು ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಆರಂಭಕ್ಕೆ ಉಂಟಾಗಿರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಸಂಸದ ಪ್ರಕಾಶ್ ಹುಕ್ಕೇರಿ ನೇತೃತ್ವದಲ್ಲಿ ನೀರಾವರಿ ತಜ್ಞರು ಹಾಗೂ ಅಧಿಕಾರಿಗಳು ಸಮಿತಿ ರಚಿಸಿ ಕೃ‍ಷ್ಣ, ಕಾವೇರಿ, ಮಹದಾಯಿ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ದೆಹಲಿಯಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ವಿವರಿಸಿದರು.

ಮೇಕೆದಾಟು ಯೋಜನೆಗೆ ಮುಳುಗಡೆಯಾಗಲಿರುವ 12.500 ಎಕರೆ ಅರಣ್ಯಭೂಮಿಗೆ ಪರ್ಯಾಯ ಜಮೀನು ನೀಡಲು ಈಗಾಗಲೇ 20 ಸಾವಿರ ಎಕರೆ ಜಮೀನು ಗುರುತಿಸಲಾಗಿದ್ದು, ಸದರಿ ಜಮೀನಿನ ಪೈಕಿ 12.500 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಾವೇರಿ ನದಿ ಪಾತ್ರದ 4 ಜಲಾಶಯಗಳಲ್ಲಿ ಪ್ರಸ್ತುತ 90 ಟಿಎಂಸಿ ನೀರು ಲಭ್ಯವಿದ್ದು, ಪ್ರಕೃತಿಯು ಸಹ ಪೂರಕವಾಗಿದೆ. ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದ್ದು, ಈಗಾಗಲೇ ಹೇಮಾವತಿ ನದಿ ಪಾತ್ರದ ರೈತರ ಜಮೀನಿಗೆ ನೀರು ಹರಿಸಲಾಗಿದ್ದು, ಒಂಡೆರಡು ದಿನಗಳಲ್ಲಿ ಕೆ.ಆರ್.ಎಸ್. ಸಲಹಾ ಸಮಿತಿ ಸಭೆ ಕರೆದು ಅಲ್ಪಾವಧಿ ಬೆಳೆಗೆ ನೀರು ಹರಿಸಲು ಕ್ರಮ ವಹಿಸಲಾಗುವುದು ಎಂದರು.

ಕಾವೇರಿ ನದಿ ಪಾತ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರಕ್ಕೆ ವಿಪಕ್ಷಗಳು ಹಾಗೂ ಸಂಘಟನೆಗಳು ಸಹಕಾರ ನೀಡಬೇಕು, ರಾಜ್ಯದ ಹಿತದೃಷ್ಠಿ ಹಾಗೂ ರೈತರ ಅಪೇಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅಗತ್ಯ ಕ್ರಮ ವಹಿಸಲಿದೆ ಎಂದರು.

 

Tags:
error: Content is protected !!