ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ದೇವಾಲಯ ಪಟ್ಟಣವಾದ ತಾರಾಪಿತ್ನಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್ನ ನೆಲ ಮಹಡಿಯಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು, ಆಗ ಹೆಚ್ಚಿನ ಅತಿಥಿಗಳು ನಿದ್ದೆ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಸುದ್ದಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದು, ಗಾಯಾಳುಗಳನ್ನು ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.




