Mysore
25
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿ ಶಿಕ್ಷೆಗೊಳಗಾಗಿದ್ದ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್, ಇಂದು (ಆ.20-ಗುರುವಾರ) ದೆಹಲಿಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸಜ್ಜನ್‌ ಕುಮಾರ್ ಅವರನ್ನು, ಸಫ್ದರ್‌ಜಂಗ್ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರವಾದ ಕಾರಣವನ್ನು ಆಸ್ಪತ್ರೆಯು ಇನ್ನೂ ಸ್ಪಷ್ಟಪಡಿಸಿಲ್ಲ.

ಮೂರು ಬಾರಿ ಲೋಕಸಭೆ ಸದಸ್ಯರಾಗಿದ್ದ ಸಜ್ಜನ್ ಕುಮಾರ್, ‘ಔಟರ್ ದೆಹಲಿ’ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು ಪ್ರಮುಖ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದರು. 2018ರಲ್ಲಿ ಅಪರಾಧಿಯೆಂದು ತೀರ್ಪು ಬಂದ ನಂತರ, ಸಜ್ಜನ್‌ ಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Tags:
error: Content is protected !!