Mysore
27
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಹುಲಿ ನೋಡಲು ತೆರಳಿದ್ದ ಸಫಾರಿ ವಾಹನ ಅಪಘಾತ: 25 ಪ್ರವಾಸಿಗರಿಗೆ ಗಾಯ

ಎಚ್‌.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ.

ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ ಮಾಹಿತಿ ಆಧರಿಸಿ, ಹುಲಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ವಾಹನದ ಗೇರ್‌ ಕಾರ್ಯನಿರ್ವಹಿಸದೆ ಚಾಲಕನ ನಿಯಂತ್ರಣ ತಪ್ಪಿದ ಸಫಾರಿ ವಾಹನ, ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಾಹನದ ಮುಂಭಾಗ ನುಜ್ಜುಗುಜ್ಜಾಗಿದೆ.

ಸಫಾರಿ ವಾಹನದಲ್ಲಿದ್ದ ಸುಮಾರು 25 ಮಂದಿ ಪ್ರವಾಸಿಗರಲ್ಲಿ ಹೆಚ್ಚಿನವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಗಾಯಾಳುಗಳನ್ನು ತುರ್ತು ವಾಹನಗಳ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Tags:
error: Content is protected !!