ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ ಎಂದು ಅವರು ತಿಳಿಸಿದ್ದಾರೆ.
ಈ ಮೂಲಕ ಬೆಳಿಗ್ಗೆಯಿಂದಲೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ರಾಜೀನಾಮೆ ಸುದ್ದಿಯನ್ನು ಸಚಿವ ನಾಗೇಂದ್ರ ತಿರಸ್ಕಾರ ಮಾಡಿದ್ದಾರೆ.



