ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ.
ಕೊಡಗಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದೆ.
ಇಂದು ಕೆಆರ್‌ಎಸ್ ಜಲಾಶಯಕ್ಕೆ 17,427 ಕ್ಯೂಸೆಕ್ಸ್ ಒಳಹರಿವು ದಾಖಲಾಗಿದೆ. ಜಲಾಶಯದಿಂದ 4,514 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇನ್ನು ಜಲಾಶಯದ ನೀರಿನ ಮಟ್ಟ 110 ಅಡಿ ತಲುಪಿದೆ.
ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಜನರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.



