Mysore
25
few clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬೆಳಿಗ್ಗೆ 11ಕ್ಕೆ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯಕೆ.ಶಿವಕುಮಾರ್ ಅವರ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಊಟಿ ರಸ್ತೆಯ ಕೆಎನ್‌ಎಸ್ ಬಡಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದಲ್ಲಿ ನಡೆಯಲಿರುವ ಡಾ.ಶ್ರೀಶಿವರಾತ್ರಿ ರಾಜೇಂದ್ರಸ್ವಾಮೀಜಿ ಅವರ 111ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

 

 

Tags:
error: Content is protected !!