ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಐವರು ನೌಕರರನ್ನು ಬ್ಯಾಂಕಿನ ಆಡಳಿತ ಮಂಡಳಿ ಅಮಾನತ್ತುಗೊಳಿಸಿದೆ ಎಂದು ತಿಳಿದು ಬಂದಿದೆ. ಅಕ್ರಮಗಳು ನಡೆಯುತ್ತಿರುವ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ಮೂಲಕ ಗ್ರಾಹಕರು ಮತ್ತು ಠೇವಣಿದಾರರ ಹಿತವನ್ನು ರಕ್ಷಿಸಬೇಕಾಗಿದೆ.
-ಕೆ.ವಿ.ವಾಸು, ವಿವೇಕಾನಂದರ ನಗರ, ಮೈಸೂರು



