Mysore
32
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ಚೌಲಾನಿ ನದಿ ಭಾಗಶಃ ಬಂದ್ ಆಗಿದೆ.

ಚೌಲಾನಿ ನದಿಯು ಮುಂದೆ ಮಹಾಕಾಳಿ ನದಿಯನ್ನು ಸೇರುವುದರಿಂದ, ಭೂಕುಸಿತದ ಪರಿಣಾಮ ನದಿಯ ನೀರಿನ ಹರಿವಿನಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ. ನದಿಯಲ್ಲಿ ನೀರು ಸಂಗ್ರಹಗೊಂಡು ಏಕಾಏಕಿ ಹರಿವಿನ ಪ್ರಮಾಣ ಹೆಚ್ಚಾದರೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ನದಿ ದಡದಲ್ಲಿ ವಾಸಿಸುವ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

Tags:
error: Content is protected !!