Mysore
27
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ರಾಜ್ಯದಲ್ಲಿ ಮತ್ತಷ್ಟು ತಗ್ಗಲಿದೆ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನು ಮಳೆಯ ಕೊರತೆ ಬೆನ್ನಲ್ಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ಮಳೆ ಕಡಿಮೆಯಾಗಿರುವ ಕಾರಣ ಬಿಸಿಲಿನ ಧಗೆ ಹೆಚ್ಚಾಗಿದೆ.

ಈ ತಿಂಗಳು ಮುಗಿಯುವವರೆಗೂ ತಾಪಮಾನ ಮತ್ತಷ್ಟು ಏರಿಕೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜನತೆ ಆರೋಗ್ಯದ ಕಡೆ ಗಮನಹರಿಸುವಂತೆ ಸೂಚನೆ ನೀಡಿದೆ.

 

Tags:
error: Content is protected !!