Mysore
28
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.

13,166 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ನಗರದ ಡಿ.ಬನುಮಯ್ಯ ಪದವಿ ಪೂರ್ವ ಕಾಲೇಜು, ಮಹಾರಾಣಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಮಹಾರಾಜ ಪದವಿಪೂರ್ವ ಕಾಲೇಜು ಸೇರಿದಂತೆ 39 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಒಟ್ಟು 16,550 ಮಂದಿ ನೋಂದಣಿ ಮಾಡಿಕೊಂಡಿದ್ದರೂ 13,166 ಮಂದಿ ಹಾಜರಾಗಿದ್ದರೆ,3,424 ಮಂದಿ ಗೈರು ಹಾಜರಾಗಿದ್ದರು.

ಪರೀಕ್ಷಾ ಪ್ರಕ್ರಿಯೆಯು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನಡೆಯುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಂದ ಮೊಬೈಲ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಪಡೆಯಲಾಯಿತು. ನಕಲು ಹಾಗೂ ಅಕ್ರಮಗಳನ್ನು ತಡೆಯಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

Tags:
error: Content is protected !!