Mysore
31
scattered clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಸಫಾರಿ ವಾಹನಗಳ ಸಂಚಾರದ ಮೇಲೆ ನಿರಂತರ ನಿಗಾ ವಹಿಸುವುದರ ಜತೆಗೆ, ವನ್ಯಜೀವಿಗಳ ಚಲನವಲನದ ಮೇಲೂ ಹೆಚ್ಚಿನ ಗಮನಹರಿಸಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ವಾಹನಗಳು ಸಂಚರಿಸುವ ಮಾರ್ಗ, ವೇಗ ಸೇರಿದಂತೆ ವಿವಿಧ ಮಾಹಿತಿಯನ್ನು ಜಿಪಿಎಸ್ ಮೂಲಕ ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದೆ.

ಡ್ಯಾಶ್ ಕ್ಯಾಮ್ ಅಳವಡಿಕೆಯಿಂದ ಸಫಾರಿ ವೇಳೆ ನಡೆಯುವ ಚಟುವಟಿಕೆಗಳನ್ನು ದಾಖಲಿಸಿಕೊಳ್ಳಲು ಅನುಕೂಲವಾಗಲಿದ್ದು, ವನ್ಯಜೀವಿಗಳ ಸುರಕ್ಷತೆ ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಸಫಾರಿ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಜಿ ಎಸ್ ಬೆಟ್ಡ ವಲಯಾಧಿಕಾರಿ ಸತೀಶ್ ತಿಳಿಸಿದರು.

Tags:
error: Content is protected !!