Mysore
25
overcast clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ ಮಾಡಿಸುತ್ತಿರುವುದನ್ನು ನೋಡಿ ಸಿಟ್ಟಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಾಲಕಾರ್ಮಿಕರಿಂದ ದುಡಿಸುವವರನ್ನು ತಕ್ಷಣ ಬಂಧಿಸಿ ಎಂದು ಆದೇಶ ನೀಡಿರುವುದು ಶ್ಲಾಘನೀಯ.

ಅದರಂತೆ ಕೆಲವು ಬಾಲಕಾರ‍್ಮಿಕರನ್ನು ರಕ್ಷಿಸಿ, ನಾಲ್ಕು ಅಂಗಡಿ ಮಾಲೀಕರನ್ನು ಬಂಧಿಸಿರುವ ಪೊಲೀಸರ ಕಾರ್ಯ ಮೆಚ್ಚುವಂತಹದ್ದು. ರೈತರು,ವರ್ತಕರು,ಹಮಾಲಿಗಳ ಸಮಸ್ಯೆ ಆಲಿಸಿ ಎಪಿಎಂಸಿಯಲ್ಲಿನ ಮೂಲ ಸೌಕರ್ಯಗಳ ಕೊರತೆ ಬಗ್ಗೆ  ಮನಹರಿಸಿ ಎಂದು ಹೇಳಿರುವುದು, ಕಮಿಷನ್ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗಬಾರದು ಹಾಗೂ ವರ್ತಕರಿಗೂ ಅನ್ಯಾಯವಾಗಬಾರದು, ಅಧಿಕಾರಿಗಳು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ತಿಳಿಸಿರುವುದು ಸ್ವಾಗತಾರ್ಹ. ಎಲ್ಲ ಸಚಿವರು ತಮ್ಮ ವ್ಯಾಪ್ತಿಗೆ ಬರುವ ಎಪಿಎಂಸಿ ಮಾರುಕಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವತ್ತಾ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿರುವುದು ಒಳ್ಳೆಯದೆ. ಆದರೆ ಅದು ಕಾರ್ಯರೂಪಕ್ಕೆ ಬರಬೇಕು.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

Tags:
error: Content is protected !!