Mysore
31
overcast clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ ಆಗಮಿಸಲಿರುವ ಜಿನ್‌ಪಿಂಗ್‌, ಸೆಪ್ಟೆಂಬರ್‌ 12 ಹಾಗೂ 13ರಂದು ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕ್ಸಿ ಜಿನ್‌ಪಿಂಗ್‌ ನಡುವೆ ಭೇಟಿಯಾಗುವ ಸಾಧ್ಯತೆ ಇದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹಾಗೂ ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಯುವ ಸಾಧ್ಯತೆ ಇದೆ.

ಗಡಿ ವಿವಾದ ಸೇರಿದಂತೆ ಹಲವು ವಿಚಾರಗಳಲ್ಲಿ ಭಾರತ-ಚೀನಾ ನಡುವೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ, ಮೋದಿ-ಜಿನ್‌ಪಿಂಗ್‌ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. 7 ವರ್ಷಗಳ ಬಳಿಕ ಚೀನಾ ಅಧ್ಯಕ್ಷರ ಭಾರತ ಪ್ರವಾಸ ಉಭಯ ದೇಶಗಳ ಸಂಬಂಧದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗುತ್ತದೆಯೇ ಎಂಬ ಕುತೂಹಲ ಮೂಡಿಸಿದೆ.

Tags:
error: Content is protected !!