Mysore
31
overcast clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು.

ಹನುಮ ಹುಟ್ಟಿದ ನಾಡು ಎಂದು ನಂಬಲಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿದ ಸಂಸದ ಯದುವೀರ್, ಬೆಟ್ಟದ 575 ಮೆಟ್ಟಿಲುಗಳನ್ನು ಏರುವ ಮೂಲಕ ಆಂಜನೇಯನ ದರ್ಶನ ಪಡೆದರು.

ಬಳಿಕ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಖ-ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಅಂಜನಾದ್ರಿಗೆ ಯದುವೀರ್ ಭೇಟಿ ನೀಡಿರುವುದು ಭಕ್ತರ ಗಮನ ಸೆಳೆದಿದೆ.

Tags:
error: Content is protected !!