Mysore
32
broken clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗರಿಕೆಕಂಡಿ ಗುಡ್ಡೆಯೂರು ಹಳ್ಳದ ಬಳಿ ಅರಣ್ಯ ಪ್ರದೇಶದಲ್ಲಿ 55 ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದೆ.

ರಾಮಾಪುರ ಪೊಲೀಸರ ಭೇಟಿ: ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ರಾಮಾಪುರ ವೃತ್ತ ನಿರೀಕ್ಷಕ ಚಿಕ್ಕರಾಜ ಶೆಟ್ಟಿ, ಎಎಸ್ಐ ಗುರುಸ್ವಾಮಿ ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ವಿಷದ ಬಾಟಲ್ ಪತ್ತೆಯಾಗಿದ್ದು, 50 ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶವವನ್ನು ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!