Mysore
22
overcast clouds

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ ನಡೆಯುವ ಪಾವತಿಗಳಿಗೂ ಯಾವುದೇ ಶುಲ್ಕ ವಿಧಿಸುವಂತಿಲ್ಲ. ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ.

ಸರ್ಕಾರದ ಅಧಿಸೂಚನೆಯ ಪ್ರಕಾರ, ನಿಗದಿಪಡಿಸಿರುವ ಎಲೆಕ್ಟ್ರಾನಿಕ್ ಪಾವತಿ ವಿಧಾನಗಳನ್ನು ಬಳಸಿಕೊಂಡು ಪಾವತಿ ಮಾಡುವ ಅಥವಾ ಸ್ವೀಕರಿಸುವ ಯಾವುದೇ ವ್ಯಕ್ತಿಯಿಂದ ಬ್ಯಾಂಕ್‌ಗಳು ಅಥವಾ ಪಾವತಿ ವ್ಯವಸ್ಥೆ ಒದಗಿಸುವ ಸಂಸ್ಥೆಗಳು ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಶುಲ್ಕ ವಿಧಿಸುವಂತಿಲ್ಲ. ಅಂದರೆ 2,000 ರೂ. ವರೆಗಿನ UPI ಪಾವತಿಗಳಿಗೆ ಶುಲ್ಕವಿಲ್ಲ!

Tags:
error: Content is protected !!