ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್ ರಾವ್ ಅವರ ಕಾಲಿಗೆ ತೀವ್ರ ಗಾಯವಾಗಿತ್ತು.
ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಓಂ ಪ್ರಕಾಶ್ ರಾವ್ ಅವರಿಗೆ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆ ನಡೆಯುತ್ತಿದೆ.
ಚಿಕಿತ್ಸೆ ಪಡೆದುಕೊಂಡ ಬಳಿಕ ಓಂ ಪ್ರಕಾಶ್ ರಾವ್ ಮತ್ತೆ ಬಿಗ್ಬಾಸ್ ಮನೆಗೆ ಮರಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.




